ಸರಳವಾಗಿ ನಡೆದ ನಿಖಿಲ್-ರೇವತಿ ಮದುವೆ


; ಸಹಕರಿಸಿದ ಶಾಸಕರು, ಕಾರ್ಯಕರ್ತರಿಗೆ ಎಚ್ಡಿಕೆ ಕೃತಜ್ಞತೆ
ಜಗತ್ತು ಪ್ರಸಕ್ತ ಎದುರಿಸುತ್ತಿರುವ ಈ ಗಂಡಾಂತರ ಕಳೆದು ಪರಿಸ್ಥಿತಿ ಸಹಜವಾದಾಗ ನಾವು ಮತ್ತು ನೀವುಗಳು ಜತೆ ಸೇರಿ ಒಟ್ಟಿಗೆ ಕುಳಿತು ಊಟ ಮಾಡೋಣ. ನಿಮ್ಮ ಹೃದಯ ವೈಶಾಲ್ಯ ಮತ್ತು ಪ್ರೀತಿಗೆ ನಾವುಗಳು ಸದಾ ಋಣಿ. ನವದಂಪತಿಗೆ ಹರಸಿದ ಪ್ರತಿಯೊಬ್ಬರಿಗೆ ಮತ್ತೊಮ್ಮೆ ಹೃದಯತುಂಬಿದ ಕೃತಜ್ಞತೆಗಳು ಎಂದು ಎಚ್ಡಿಕೆ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.
ಸರಳವಾಗಿ ನಡೆದ ನಿಖಿಲ್-ರೇವತಿ ಮದುವೆ; ಸಹಕರಿಸಿದ ಶಾಸಕರು, ಕಾರ್ಯಕರ್ತರಿಗೆ ಎಚ್ಡಿಕೆ ಕೃತಜ್ಞತೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮಗ ನಿಖಿಲ್ ಹಾಗೂ ರೇವತಿ ಅವರ ಮದುವೆ ಇಂದು ರಾಮನಗರ ಸಮೀಪದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಸರಳವಾಗಿ ನೆರವೇರಿದೆ.
ಈ ಮೊದಲು ಮದುವೆಯನ್ನು ಚನ್ನಪಟ್ಟಣ ಬಳಿಯಿರುವ ಜಾನಪದ ಲೋಕದ ಬಳಿ ಅದ್ದೂರಿಯಾಗಿ ಮಾಡಲು ನಿಶ್ಚಿಯಿಸಲಾಗಿತ್ತು. ಆದರೆ, ಮಾರಕ ಕೊರೋನಾ ವೈರಸ್ನಿಂದಾಗಿ ದೇಶಾದ್ಯಂತ ಲಾಕ್ಡೌನ್ ಘೋಷಿಸಲಾಗಿದ್ದು, ಮದುವೆ, ಶುಭ ಸಮಾರಂಭಗಳಲ್ಲಿ ಹೆಚ್ಚಿನ ಜನ ಸೇರುವಂತಿಲ್ಲ ಎಂದು ಆದೇಶಿಸಲಾಗಿದೆ. ಹೀಗಾಗಿ ಇವರ ಮದುವೆ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಅತ್ಯಂತ ಸರಳವಾಗಿ ನಡೆಯಿತು. ಸಮಾರಂಭದಲ್ಲಿ ಕುಟುಂಬ ಸದಸ್ಯರಷ್ಟೇ ಪಾಲ್ಗೊಂಡಿದ್ದರು.
ಮದುವೆ ಸರಳವಾಗಿ ನಡೆಯಲಿದ್ದು, ಸರ್ಕಾರದ ಸೂಚನೆಯಂತೆ ಯಾರೂ ಕೂಡ ಮದುವೆಗೆ ಬರುವುದು ಬೇಡ. ಮನೆಯಿಂದಲೇ ಶುಭ ಆರೈಸಿ ಎಂದು ಎಚ್ಡಿ ಕುಮಾರಸ್ವಾಮಿ ಅವರು ಈ ಹಿಂದೆಯೇ ಪಕ್ಷದ ಕಾರ್ಯಕರ್ತರು ಹಾಗೂ ಜನರಲ್ಲಿ ಮನವಿ ಮಾಡಿದ್ದರು. ಅದರಂತೆ ಇಂದು ಕುಟುಂಬ ಸದಸ್ಯರನ್ನು ಹೊರತುಪಡಿಸಿ ಯಾರೊಬ್ಬರು ಮದುವೆಯಲ್ಲಿ ಪಾಲ್ಗೊಂಡಿಲ್ಲ. ತಮ್ಮ ಮನವಿಗೆ ಒಗೊಟ್ಟ ಎಲ್ಲ ಕಾರ್ಯಕರ್ತರು, ಶಾಸಕರು ಹಾಗೂ ಹಿತೈಷಿಗಳಿಗೆ ಕುಮಾರಸ್ವಾಮಿ ಅವರು ಕೃತಜ್ಞತೆ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿ ನಡೆಯಲು ಸಹಕರಿಸಿದ ಲಕ್ಷಾಂತರ ಕಾರ್ಯಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಹೃದಯಾಂತರಾಳದ ಕೃತಜ್ಞತೆಗಳು.
ಇಡೀ ಜಗತ್ತು ಕೊರೋನಾ ವೈರಸ್ ಎಂಬ ಮಹಾಮಾರಿಯಿಂದ ತತ್ತರಿಸುತ್ತಿರುವ ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ಸಾಮಾಜಿಕ ಅಂತರ ಹಾಗೂ ಮುನ್ನೆಚ್ಚರಿಕೆಯ ನಡುವೆ ವಿವಾಹ ಅಚ್ಚುಕಟ್ಟಾಗಿ ನೆರವೇರಿದೆ.
ಶಾಸಕರು, ಕಾರ್ಯಕರ್ತರು, ಮುಖಂಡರು, ಕುಟುಂಬದ ಹಿತೈಷಿಗಳು ಸೇರಿದಂತೆ ನಾಡಿನ ಲಕ್ಷಾಂತರ ನನ್ನ ಕುಟುಂಬದ ಕುಡಿಯ ವಿವಾಹಕ್ಕೆ ಮನೆಯಿಂದಲೆ ಹರಸಿದ್ದೀರಿ. ನಾನು ಮತ್ತು ನನ್ನ ಕುಟುಂಬ ವರ್ಗ ಮಾಡಿದ ಮನವಿಗೆ ನೀವುಗಳು ಸ್ಪಂದಿಸಿದ ರೀತಿ ಅನುಕರಣೀಯ ಮತ್ತು ಮಾದರಿ.
ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ ಕಾರ್ಯಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಹೃದಯಾಂತರಾಳದ ಕೃತಜ್ಞತೆಗಳು
ನಿಖಿಲ್ - ರೇವತಿ ವಿವಾಹ: ಸರಳವಾದರೂ ಶಾಸ್ತ್ರೋಕ್ತವಾಗಿ ನಡೆಯಿತು ಯುವರಾಜನ ಮದುವೆ..!
ಜಗತ್ತು ಪ್ರಸಕ್ತ ಎದುರಿಸುತ್ತಿರುವ ಈ ಗಂಡಾಂತರ ಕಳೆದು ಪರಿಸ್ಥಿತಿ ಸಹಜವಾದಾಗ ನಾವು ಮತ್ತು ನೀವುಗಳು ಜತೆ ಸೇರಿ ಒಟ್ಟಿಗೆ ಕುಳಿತು ಊಟ ಮಾಡೋಣ. ನಿಮ್ಮ ಹೃದಯ ವೈಶಾಲ್ಯ ಮತ್ತು ಪ್ರೀತಿಗೆ ನಾವುಗಳು ಸದಾ ಋಣಿ. ನವದಂಪತಿಗೆ ಹರಸಿದ ಪ್ರತಿಯೊಬ್ಬರಿಗೆ ಮತ್ತೊಮ್ಮೆ ಹೃದಯತುಂಬಿದ ಕೃತಜ್ಞತೆಗಳು ಎಂದು ಎಚ್ಡಿಕೆ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.
0 Comments