ಸಾಂದರ್ಭಿಕ ಚಿತ್ರ

ಬೆಂಗಳೂರು : ಮಹಾಮಾರಿ‌ ಕೊರೊನಾ ಸೋಂಕು ಹರಡುತ್ತಿದ್ದು, ಇದೀಗ ಬೆಂಗಳೂರಿನ ಪೊಲೀಸರಿಗೆ ಸೋಂಕು ಕಾಣಿಸಿಕೊಂಡಿದೆ.

ಟಿಪ್ಪು ನಗರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಚಾಮರಾಜಪೇಟೆ ಪೊಲೀಸ್ ಠಾಣೆ ಪೇದೆಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಚಾಮರಾಜಪೇಟೆ ಪೊಲೀಸ್ ಠಾಣೆಗೆ ಔಷಧಿ ಸಿಂಪಡಿಸಲು ಬಿಬಿಎಂಪಿ ನಿರ್ಧಾರ ಮಾಡಿದೆ.

ಸದ್ಯ ಸೋಂಕಿತ ಪೇದೆಯನ್ನ ಬೆಂಗಳೂರಿನ ಕೊರೊನಾ ನಿಗಧಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ನಿನ್ನೆ ಬಂದ ವರದಿಯಲ್ಲಿ, ಫ್ರೇಝರ್ ಟೌನ್ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯಲಹಂಕ ಮೂಲದ ಸಂಚಾರಿ ಪೊಲೀಸ್ ಪೇದೆಗೆ ಸೋಂಕು ಕಾಣಿಸಿಕೊಂಡಿತ್ತು.