ಮೇ 31 ರವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಆದೇಶ ನೀಡಲಾಗಿದೆ‌. ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆ ವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದ್ದು, ಸಂಪೂರ್ಣ ಲಾಕ್‍ಡೌನ್ ಇರಲಿದೆ.

ಭಾನುವಾರ ಯಾವುದಕ್ಕೆ ಅವಕಾಶ :

  • ಹಣ್ಣು, ತರಕಾರಿ, ದಿನಸಿ, ಮಾಂಸದ ಅಂಗಡಿಗಳಿಗೆ ತೆರೆಯಲು ಅವಕಾಶ
  • ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್ಸ್, ಫಾರ್ಮಸಿ ಗಳಿಗೆ ಅವಕಾಶ
  • ಡಾಕ್ಟರ್ಸ್, ನರ್ಸ್, ಆಂಬುಲೆನ್ಸ್, ಮಾಧ್ಯಮಗಳು ಓಡಾಟಕ್ಕೆ ಅವಕಾಶ
  • ಡಯಾಲಿಸಿಸ್, ಅನಾರೋಗ್ಯ ಸಮಸ್ಯೆ ಇದ್ದವರು ಆಸ್ಪತ್ರೆಗೆ ತೆರಳಲು ಅನುಮತಿ
  • ಗರ್ಭಿಣಿ ಸ್ತ್ರೀಯರು ಆಸ್ಪತ್ರೆಗೆ ತೆರಳಲು ಅನುಮತಿ
  • ಮದುವೆ ಸಮಾರಂಭಗಳಿಗೆ ಷರತ್ತಿನ ಅನುಮತಿ

ಭಾನುವಾರ ಯಾವುದಕ್ಕೆ ಅವಕಾಶ ಇಲ್ಲ :

  • ಸಾರ್ವಜನಿಕ ಸಂಚಾರಕ್ಕೆ ಸಂಪೂರ್ಣ ನಿಷೇಧ
  • ಖಾಸಗಿ / ಸರ್ಕಾರಿ ಬಸ್ ಸಂಚಾರ ಇರಲ್ಲ
  • ಅಗತ್ಯ ವಸ್ತುಗಳನ್ನ ಹೊರತು ಪಡಿಸಿ, ಉಳಿದ ಅಂಗಡಿ ಮುಂಗಟ್ಟುಗಳು ಬಂದ್
  • ನಗರದ ಪ್ರಮುಖ ರಸ್ತೆಗಳು ಬಂದ್
  • ಬ್ಯೂಟಿ ಪಾರ್ಲರ್, ಸಲೂನ್, ಸ್ಪಾ, ಬಟ್ಟೆ ಅಂಗಡಿ, ಚಪ್ಪಲಿ ಅಂಗಡಿ ಮುಂಗಟ್ಟುಗಳು ತೆರೆಯುವಂತೆ ಇಲ್ಲ
  • ಗಾರ್ಮೆಂಟ್ಸ್ / ಖಾಸಗಿ ಕಂಪನಿಗಳು/ ಫ್ಯಾಕ್ಟರಿ ಸೇರಿದಂತೆ ಎಲ್ಲಾ ಕಾರ್ಖಾನೆಗಳು ಲಾಕ್
  • ಪಾರ್ಕ್ ಗಳಿಗೆ ಒಳ ಪ್ರವೇಶ ಇಲ್ಲ
  • ಚಿನ್ನದ ಅಂಗಡಿಗಳು ಕೂಡ ಬಂದ್
  • ಆಟೋ, ಟ್ಯಾಕ್ಸಿ ಕ್ಯಾಬ್ ಗಳು ರಸ್ತೆಗೆ ಇಳಿಯುವಂತಿಲ್ಲ
  • ಖಾಸಗಿ ವಾಹನ ಬಳಸಿ ಓಡಾಡುವಂತೆ ಇಲ್ಲ
  • ಬೇರೆ ಜಿಲ್ಲೆಗೆ ಹೋಗಲು ಅವಕಾಶವಿಲ್ಲ
  • ಬಾರ್/ MRP ಔಟ್ ಲೆಟ್ ತೆರೆಯುವಂತೆ ಇಲ್ಲ